Uttarakhand Bus Accident: ಉತ್ತರಾಖಂಡದ ಅಲ್ಮೋರಾ ಜಿಲ್ಲೆಯ ಮಾರ್ಚುಲ ಪ್ರದೇಶದಲ್ಲಿ 200 ಮೀಟರ್ ಆಳದ ಕಂದಕ್ಕೆ ಬಸ್ ಉರುಳಿ 36 ಜನ ಸಾವನಪ್ಪಿದ್ದಾರೆ. ಇಂದು ಬೆಳಗ್ಗೆ ನಡೆದ ಈ ಬಸ್ ಅಪಘಾತದಲ್ಲಿ 5 ಜನ ಕಾಣೆಯಾಗಿದ್ದು, ಎಸ್‌ಡಿಆರ್‌ಎಫ್ ಶೋಧ ಹಾಗೂ ರಕ್ಷಣಾ ಕಾರ್ಯಚರಣೆ ಮುಂದುವರೆಸಿದೆ. 10 ಮಂದಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
43 ಆಸನಗಳ ಮಿತಿಯಿದ್ದ ಬಸ್ಸಿನಲ್ಲಿ 60 ಜನರನ್ನು ಕೊಂಡೊಯ್ಯಲಾಗುತ್ತಿತ್ತು, ಅಪಘಾತ ಸಂಭವಿಸಿದಾಗ ಹೆಚ್ಚಿನ ಸಂಖ್ಯೆಯ ಪ್ರಯಾಣಿಕರು ಹೊರಗೆ ಬಿದ್ದರು, ಉಳಿದವರು ತಮ್ಮನ್ನು ತಾವು ರಕ್ಷಣೆ ಮಾಡಿಕೊಳ್ಳುವಲ್ಲಿ ಯಶಸ್ವಿಯಾಗಿರುವುದಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದವರಿಂದ ಮಾಹಿತಿ ಪಡೆಯಲಾಗಿದೆ.
ಬೆಳಗಿನ ಜಾವ 7 ಘಂಟೆ ಸುಮಾರಿಗೆ ಸರಾದ್ ಬೆಂಡ್ ಪ್ರದೇಶದ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದಿದೆ, ಪೌರಿ ಘರ್ವಾಲ್ ಜಿಲ್ಲೆಯ ನೈನಿ ದಂಡಾದಿಂದ ನೈನಿಟಾಲ್ ಜಿಲ್ಲೆಯ ರಾಮನಗರಕ್ಕೆ ಬಸ್ ತೆರಳುವ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿರುವುದಾಗಿ ಅಧಿಕಾರಿಗಳು ತಿಳಿಸಿರುವುದಾಗಿ TOI ವರದಿ ಮಾಡಿದೆ,
ಬಸ್ ಹಾಗೂ ಕಂದಕದಲ್ಲಿ ಸಿಲುಕಿದ್ದವರನ್ನು ಸ್ಥಳೀಯ ಗ್ರಾಮದವರ ಸಹಾಯದಿಂದ ಗಾಯಗೊಂಡವರನ್ನು ಹತ್ತಿರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ವಿಪತ್ತು ನಿರ್ವಹಣಾ ಅಧಿಕಾರಿ ವಿನೀತ್ ಪಾಲ್ TOI (Times of India) ಗೆ ತಿಳಿಸಿರುವುದಾಗಿ ವರದಿ ಮಾಡಿದೆ.
ಘಟನೆಗೆ ಸಂಬಂಧಿಸಿದಂತೆ ಉತ್ತರಾಖಂಡದ ಸಿ ಎಂ ಪುಷ್ಕರ್ ಸಿಂಗ್ ಧಾಮಿ, ಶೋಧ ಹಾಗೂ ರಕ್ಷಣಾ ಕಾರ್ಯಚರಣೆಗೆ ಎನ್‌ಡಿಆರ್‌ಎಫ್ ಕೂಡ ಕೈ ಜೋಡಿಸಿರುವುದಾಗಿ ತಿಳಿಸಿದ್ದಾರೆ, ಹಾಗೂ ಘಟನೆಯಲ್ಲಿ ಸಾವನಪ್ಪಿರುವವರಿಗೆ ತಲಾ 4 ಲಕ್ಷ ಹಾಗೂ ಗಾಯಗೊಂಡವರಿಗೆ ತಲಾ 1 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ.
ಇನ್ನು ಘಟನೆಗೆ ಪಿ ಎಂ ನರೇಂದ್ರ ಮೋದಿ ಸಂತಾಪ ಸೂಚಿಸಿ, PMNRF (Prime Minister’s National Relief Fund) ನಿಂದ ಮೃತರ ಸಂಬಂಧಿಕರಿಗೆ 2 ಲಕ್ಷ ಹಾಗೂ ಅಪಘಾತದಲ್ಲಿ ಗಾಯಗೊಂಡವರಿಗೆ 50,000 ರೂ. ಪರಿಹಾರ ಘೋಷಿಸಿದ್ದಾರೆ.